Type Here to Get Search Results !

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಬ್ರಹ್ಮಾವರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೇರಾಡಿ ಶ್ರೀ ದುರ್ಗಾಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದಲ್ಲಿ ಮೂರನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ-KARAVALIVANINEWS

 ಈ ಸುದ್ದಿ ಓದಲು ಕ್ಲಿಕ್ ಮಾಡಿ@karavalivani, @ಕರಾವಳಿವಾಣಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಬ್ರಹ್ಮಾವರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೇರಾಡಿ ಶ್ರೀ ದುರ್ಗಾಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದಲ್ಲಿ ಮೂರನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕೂಡ್ಲಿ ಜನಾರ್ದನ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕೂಡ್ಲಿ ಜನಾರ್ದನ ದೇವಸ್ಥಾನದ ಮುಕ್ತೇಶ್ವರರಾದ ಶ್ರೀಯುತ ಶ್ರೀನಿವಾಸ ಉಡುಪ ರವರು ಉದ್ಘಾಟಿಸಿದರು. ಜ್ಞಾನವಿಕಾಸದ ಸಾಧನ ವರದಿಯನ್ನು ಸೇವಾಪ್ರತಿನಿಧಿಯಾದ ಶ್ರೀಮತಿ ಕುಸುಮಾರವರು  ಮಂಡಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೇರಾಡಿ ನಿವೃತ್ತ ಶಿಕ್ಷಕರಾದ ಶ್ರೀಯುತ ಬಾಬು ನಾಯ್ಕ್ ರವರು ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರವನ್ನು ಬೆಳೆಸುವ ಬಗ್ಗೆ ತಿಳಿಸಿ  ಹಾಗೂ ಜ್ಞಾನವಿಕಾಸದಿಂದ  ಸದಸ್ಯರಲ್ಲಾದ
 ಬದಲಾವಣೆಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.  ಕೇಂದ್ರದಿಂದ ಆದ ಬದಲಾವಣೆಗಳ ಬಗ್ಗೆ ಕೇಂದ್ರದ ಸದಸ್ಯರಾದ ರೇವತಿಯವರು  ಅನಿಸಿಕೆಯನ್ನು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತಾ ದೇವಾಡಿಗ ವಹಿಸಿದ್ದರು. ವಾರ್ಷಿಕೋತ್ಸವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಜ್ಞಾನವಿಕಾಸ ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದು, ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಜ್ಞಾನವಿಕಾಸದ ಸಮನ್ವಯಾಧಿಕಾರಿ ಶ್ರೀಮತಿ ನೇತ್ರಾವತಿ ನಿರೂಪಿಸಿ, ವಲಯದ ಮೇಲ್ವಿಚಾರಕಿ  ಶ್ರೀಮತಿ ಬಾಬಿ ಸ್ವಾಗತಿಸಿ, ಕುಸುಮರವರು  ವಂದಿಸಿದರು.
 
 
 
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad-sony

end ad-sony

recent news karavalivani-k

    ------------ With thumb-------------

      add

      close