![]() |
karavalivaninews |
@karavalivani, @ಕರಾವಳಿವಾಣಿ
ಕೋಟದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ನೇತೃತ್ವದಲ್ಲಿ ನಡೆಯುವ ಹೊಳಪು - 2022 ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯಾಡಳಿತ
ಸಂಸ್ಥೆಗಳ ಜನಪ್ರತಿನಿಧಿಗಳ ಕ್ರೀಡಾಕೂಟ ಉದ್ಘಾಟನಾ ಸಮಾರಂಭಕ್ಕೆ ರಾಜ್ಯದ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಅಶ್ವಥ್ ನಾರಾಯಣ ಆಗಮಿಸಲಿದ್ದಾರೆ.
ಮಾನ್ಯ ಸಚಿವರು ಹೊಳಪು ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಇಲಾಖಾ ಪ್ರಗತಿ ಪರಿಶೀಲನೆ ನಡೆಸಿ ಶಿವಮೊಗ್ಗದಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿ ಪ್ರಶಿಕ್ಷಣ ವರ್ಗಕ್ಕೆ ತೆರಳಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.