ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ಆಶ್ರಯದಲ್ಲಿ ಬೆಳ್ಳಿ ಹಬ್ಬದ ವರ್ಷಾಚರಣೆಯ ಅಂಗವಾಗಿ ರಜತ ಗೌರವಾರ್ಪಣೆಗೆ ಸಮಾಜಸೇವಕ ಈಶ್ವರ್ ಮಲ್ಪೆ ಆಯ್ಕೆಯಾಗಿದ್ದಾರೆ. ಇದೇ ಬರುವ ಜ.28ರಂದು ಕೋಟದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಕೋಟ ಅಮೃತೇಶ್ವರಿ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ ಕುಂದರ್ ಗೌರವಾರ್ಪಣೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಯಕರ್ನಾಟಕ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ,ಸಮಾಜ ಸೇವಕ ಬಡಾಮನೆ ರತ್ನಾಕರ ಶೆಟ್ಟಿ, ಶ್ರೀಕಾಂತ್ ಶೆಣೈ ಕೋಟ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಅಜಿತ್ ಆಚಾರ್ಯ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಲು ಕ್ಲಿಕ್ ಮಾಡಿ