ಕಮಲಾಪುರದ ಅರವಿಂದ್, ರಾಮು, ಕಲ್ಯಾಣ್ ಮತ್ತು ವಾರಂಗಲ್ ಮೂಲದ ಶಿವ ಎಂದು ಗುರುತಿಸಲಾಗಿದೆ. ಇವರೆಲ್ಲರೂ ವಿವಾಹ ಪೂರ್ವ ಚಿತ್ರೀಕರಣಕ್ಕಾಗಿ ಮೋತೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರೀ ವೆಡ್ಡಿಂಗ್ ಶೂಟಿಂಗ್ಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಇಲ್ಲಂದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಆದರೆ ರಣಧೀರ್ ಎಂಬ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಉತ್ತಮ ಚಿಕಿತ್ಸೆಗಾಗಿ ಅವರನ್ನು ಖಮ್ಮಂ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ನಾಲ್ವರು ಹನ್ಮಕೊಂಡ ಜಿಲ್ಲೆಯವರು ಎಂದು ಗುರುತಿಸಲಾಗಿದೆ.
4.1 average based on 22584 reviews.